ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ ‘ಕಿಶೋರಚಂದ್ರವಾಣಿ’ ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು. ರಾಷ್ಟ್ರಕವಿ ಕುವೆಂಪು ರಚಿಸಿದ ‘ಜಯ ಭಾರತ ಜನನಿಯ ತನುಜಾತೆ’ ಕವನವು ಅವರ ಕೈಯಲ್ಲೇ ಮುಂದೆ ಸಣ್ಣಪುಟ್ಟ ಮಾರ್ಪಾಡುಗಳನ್ನು ಪಡೆಯಿತು. […]
