Categories
Kuvempu Lyrics

ನಾಡಗೀತೆ – Naada Geethe lyrics – Kuvempu

ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ ‘ಕಿಶೋರಚಂದ್ರವಾಣಿ’ ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.

ರಾಷ್ಟ್ರಕವಿ ಕುವೆಂಪು ರಚಿಸಿದ ‘ಜಯ ಭಾರತ ಜನನಿಯ ತನುಜಾತೆ’ ಕವನವು ಅವರ ಕೈಯಲ್ಲೇ ಮುಂದೆ ಸಣ್ಣಪುಟ್ಟ ಮಾರ್ಪಾಡು­ಗಳನ್ನು ಪಡೆಯಿತು. 2004ರ ಜನವರಿ ೬ ರಂದು ರಾಜ್ಯ ಸರ್ಕಾರ ಅದನ್ನು ‘ನಾಡಗೀತೆ’ಯಾಗಿ ಗೌರವಿಸಿ ಅದಕ್ಕೊಂದು ವಿಶೇಷ ಸ್ಥಾನ ನೀಡಿತು.

Naada Geethe song details :

  • Song : Naada geethe (  Jaya Bharata Jananiya Tanujate Lyrics )
  • lyrics : Kuvempu

Jaya Bharata Jananiya Tanujate Lyrics Video:

Naada Geethe lyrics in kannada:

ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಜಯ ಸುಂದರ ನದಿ ವನಗಳ ನಾಡೇ, ಜಯ ಹೇ ರಸಋಷಿಗಳ ಬೀಡೆ!
ಭೂದೇವಿಯ ಮಕುಟದ ನವಮಣಿಯೆ, ಗಂಧದ ಚಂದದ ಹೊನ್ನಿನ ಗಣಿಯೆ;
ರಾಘವ ಮಧುಸೂಧನರವತರಿಸಿದ ಭಾರತ ಜನನಿಯ ತನುಜಾತೆ !

ಜನನಿಯ ಜೋಗುಳ ವೇದದ ಘೋಷ, ಜನನಿಗೆ ಜೀವವು ನಿನ್ನಾವೇಶ
ಹಸುರಿನ ಗಿರಿಗಳ ಸಾಲೇ, ನಿನ್ನಯ ಕೊರಳಿನ ಮಾಲೆ
ಕಪಿಲ ಪತಂಜಲ ಗೌತಮ ಜಿನನುತ, ಭಾರತ ಜನನಿಯ ತನುಜಾತೆ !

ಶಂಕರ ರಾಮಾನುಜ ವಿದ್ಯಾರಣ್ಯ, ಬಸವೇಶ್ವರ ಮಧ್ವರ ದಿವ್ಯಾರಣ್ಯ
ರನ್ನ ಷಡಕ್ಷರಿ ಪೊನ್ನ, ಪಂಪ ಲಕುಮಿಪತಿ ಜನ್ನ
ಕುಮಾರವ್ಯಾಸನ ಮಂಗಳ ಧಾಮ, ಕವಿ ಕೋಗಿಲೆಗಳ ಪುಣ್ಯಾರಾಮ
ನಾನಕ ರಾಮಾನಂದ ಕಬೀರರ ಭಾರತ ಜನನಿಯ ತನುಜಾತೆ !

ತೈಲಪ ಹೊಯ್ಸಳರಾಳಿದ ನಾಡೇ, ಡಂಕಣ ಜಕಣರ ನಚ್ಚಿನ ಬೀಡೆ
ಕೃಷ್ಣ ಶರಾವತಿ ತುಂಗ, ಕಾವೇರಿಯ ವರ ರಂಗ
ಚೈತನ್ಯ ಪರಮಹಂಸ ವಿವೇಕರ, ಭಾರತ ಜನನಿಯ ತನುಜಾತೆ !

ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ
ಹಿಂದೂ ಕ್ರೈಸ್ತ ಮುಸಲ್ಮಾನ, ಪಾರಸಿಕ ಜೈನರುದ್ಯಾನ
ಜನಕನ ಹೋಲುವ ದೊರೆಗಳ ಧಾಮ, ಗಾಯಕ ವೈಣಿಕರಾರಾಮ
ಕನ್ನಡ ನುಡಿ ಕುಣಿದಾಡುವ ಗೇಹ, ಕನ್ನಡ ತಾಯಿಯ ಮಕ್ಕಳ ದೇಹ
ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ

Naadageethe lyrics image:

Nadadevi Thayi Bhuvaneshwari Photo:
Nadadevi Thayi Bhuvaneshwari Photo Pdf:

Naadageethe lyrics pdf in Kannada:

Advertisement
Hoi Malnad Advertisement