ಪ್ರತಿಯೊಂದು ಮಗುವೂ ಹುಟ್ಟುತ್ತಲೆ ವಿಶ್ವಮಾನವ. ಬೆಳೆಯುತ್ತಾ ನಾವು ಅದನ್ನು ಅಲ್ಪ ಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ವಿಶ್ವಮಾನವನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು. ಹುಟ್ಟುವಾಗ ವಿಶ್ವಮಾನವನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾಂಗ, ವರ್ಣ ಇತ್ಯಾದಿ ಉಪಾಧಿಗಳಿಂದ ಬದ್ಧನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿಂದ ಪಾರಾಗಿ ಅವನನ್ನು ಬುದ್ಧನನ್ನಾಗಿ ಪರಿವರ್ತಿಸುವುದೇ ನಮ್ಮ ವಿದ್ಯೆ, ಸಂಸ್ಕೃತಿ, ನಾಗರಿಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪಂಚದ ಮಕ್ಕಳೆಲ್ಲ ಅನಿಕೇತನರಾಗಬೇಕು, ಲೋಕ ಉಳಿದು ಬಾಳಿ ಬದುಕಬೇಕಾದರೆ! ಮಾನವನ ವಿಕಾಸದ ಹಾದಿಯಲ್ಲಿ ಆಯಾ ಕಾಲದ […]
