Categories
Kuvempu

ವಿಶ್ವಮಾನವ ಗೀತೆ – ಓ ನನ್ನ ಚೇತನ

ಓ ನನ್ನ ಚೇತನ
ಆಗು ನೀ ಅನಿಕೇತನ!

ರೂಪರೂಪಗಳನು ದಾಟಿ
ನಾಮಕೋಟಿಗಳನು ಮೀಟಿ,
ಎದೆಯ ಬಿರಿಯೆ ಭಾವದೀಟಿ,
ಓ ನನ್ನ ಚೇತನ
ಆಗು ನೀ ಅನಿಕೇತನ!

ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ
ಆಗು ನೀ ಅನಿಕೇತನ!

ಎಲ್ಲಿಯೂ ನಿಲ್ಲದಿರು;
ಮನೆಯನೆಂದೂ ಕಟ್ಟದಿರು;
ಕೊನೆಯನೆಂದೂ ಮುಟ್ಟದಿರು;
ಓ ಅನಂತವಾಗಿರು!
ಓ ನನ್ನ ಚೇತನ
ಆಗು ನೀ ಅನಿಕೇತನ!

ಅನಂತ ತಾನ್ ಅನಂತವಾಗಿ
ಆಗುತಿಹನೆ ನಿತ್ಯಯೋಗಿ;
ಅನಂತ ನೀ ಅನಂತವಾಗು;
ಆಗು, ಆಗು, ಆಗು, ಆಗು,
ಓ ನನ್ನ ಚೇತನ
ಆಗು ನೀ ಅನಿಕೇತನ!

– ಕುವೆಂಪು

Vishwamanava Geethe pdf in Kannada

Vishwamanava Geethe image

Also read : ಕುವೆಂಪು ವಿಶ್ವ ಮಾನವ ಸಂದೇಶ – ಪಂಚಮಂತ್ರ – ಸಪ್ತ ಸೂತ್ರ
Advertisement
Advertisement Advertisement

One reply on “ವಿಶ್ವಮಾನವ ಗೀತೆ – ಓ ನನ್ನ ಚೇತನ”

Comments are closed.